1 ಅರಸುಗಳು 17:10 - ಕನ್ನಡ ಸಮಕಾಲಿಕ ಅನುವಾದ10 ಹಾಗೆಯೇ ಅವನೆದ್ದು ಚಾರೆಪತಕ್ಕೆ ಹೋಗಿ, ಪಟ್ಟಣದ ಬಾಗಿಲ ಬಳಿಗೆ ಬಂದಾಗ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು, “ನೀನು ದಯಮಾಡಿ ನನಗೆ ಕುಡಿಯುವುದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಅಲ್ಲಿಂದ ಹೊರಟು ಚಾರೆಪ್ತದ ಊರುಬಾಗಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕೂಗಿ - ದಯವಿಟ್ಟು ಕುಡಿಯುವದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಲೀಯನು ಚಾರೆಪ್ತಗೆ ಹೋದನು. ಅವನು ಊರು ಬಾಗಿಲಿಗೆ ಹೋದಾಗ, ಅಲ್ಲಿ ಒಬ್ಬ ವಿಧವೆಯನ್ನು ನೋಡಿದನು. ಆ ಸ್ತ್ರೀಯು ಬೆಂಕಿಗಾಗಿ ಸೌದೆಯನ್ನು ಒಟ್ಟುಗೂಡಿಸುತ್ತಿದ್ದಳು. ಎಲೀಯನು ಅವಳಿಗೆ, “ನನಗೆ ಕುಡಿಯುವುದಕ್ಕೆ ಚಂಬಿನಲ್ಲಿ ಸ್ವಲ್ಪ ನೀರನ್ನು ನೀನು ತರುವೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |