Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:12 - ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:12
21 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.


ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ.


ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.


ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,


ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.


ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು