Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:13
19 ತಿಳಿವುಗಳ ಹೋಲಿಕೆ  

ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.


ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!


ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.


ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು