1 ಅರಸುಗಳು 17:14 - ಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |