1 ಅರಸುಗಳು 17:21 - ಕನ್ನಡ ಸಮಕಾಲಿಕ ಅನುವಾದ21 ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹುಡುಗನ ಮೇಲೆ ಮೂರುಸಾರಿ ಬೋರಲು ಬಿದ್ದು, “ನನ್ನ ದೇವರಾದ ಸರ್ವೇಶ್ವರಾ, ಈ ಹುಡುಗನ ಪ್ರಾಣ ತಿರುಗಿ ಬರುವಂತೆ ಮಾಡಿ,” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹುಡುಗನ ಮೇಲೆ ಮೂರು ಸಾರಿ ಬೋರ್ಲಬಿದ್ದು - ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರಿಗಿ ಬರುವಂತೆ ಮಾಡು ಎಂಬದಾಗಿ ಆತನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿ |