Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಎಲೀಯನ ಪ್ರಾರ್ಥನೆಯನ್ನು ಕೇಳಿದ್ದರಿಂದ ಬಾಲಕನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರುಗಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಕೇಳಿದರು. ಹುಡುಗನ ಪ್ರಾಣ ತಿರುಗಿಬಂದು ಅವನು ಉಜ್ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದದರಿಂದ ಹುಡುಗನ ಪ್ರಾಣವು ತಿರಿಗಿ ಬಂದು ಅವನು ಉಜ್ಜೀವಿಸಿದನು. ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಎಲೀಯನ ಪ್ರಾರ್ಥನೆಗೆ ಕಿವಿಗೊಟ್ಟನು. ಆ ಬಾಲಕನು ಮತ್ತೆ ಉಸಿರಾಡಲಾರಂಭಿಸಿದನು. ಅವನು ಜೀವಂತನಾದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:22
12 ತಿಳಿವುಗಳ ಹೋಲಿಕೆ  

ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.


ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.


“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು.


ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.


ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.


ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು