1 ಅರಸುಗಳು 17:24 - ಕನ್ನಡ ಸಮಕಾಲಿಕ ಅನುವಾದ24 ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಆಕೆಯು ಅವನಿಗೆ - ನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |