Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:3 - ಕನ್ನಡ ಸಮಕಾಲಿಕ ಅನುವಾದ

3 “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಈ ಸ್ಥಳವನ್ನು ತ್ಯಜಿಸಿ, ಪೂರ್ವದಿಕ್ಕಿಗೆ ಹೋಗು. ಕೆರೀತ್ ಹಳ್ಳದ ಹತ್ತಿರ ಅಡಗಿಕೊ. ಆ ಹಳ್ಳವು ಜೋರ್ಡನ್ ನದಿಯ ಪೂರ್ವದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:3
12 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.


ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.


ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.


ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.


ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.


ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.


ಯೆಹೋವ ದೇವರ ಮಾತು ಅವನಿಗೆ ಉಂಟಾಗಿ,


ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು