Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:4 - ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಆ ಹಳ್ಳದ ನೀರನ್ನು ಕುಡಿಯಬಹುದು. ಆ ಸ್ಥಳದಲ್ಲಿರುವ ನಿನಗೆ ಆಹಾರವನ್ನು ತಂದುಕೊಡಬೇಕೆಂದು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:4
15 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.


“ನೀನೆದ್ದು ಸೀದೋನಿಗೆ ಹೊಂದಿದ ಚಾರೆಪತಕ್ಕೆ ಹೋಗಿ ಅಲ್ಲಿ ವಾಸವಾಗಿರು. ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.


ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.


ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, ದೇವರಿಗೆ ಮೊರೆ ಇಡುವಾಗ, ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು?


ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.


“ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು.


ಅವನು ಹೋಗಿ ಯೆಹೋವ ದೇವರ ಮಾತಿನ ಹಾಗೆಯೇ ಮಾಡಿದನು. ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸವಾಗಿದ್ದನು.


ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಬಿದ್ದಿರುವುದನ್ನೂ, ಕತ್ತೆಯೂ, ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವುದನ್ನೂ ಕಂಡನು.


ಆಗ ಯೋನನು ಮೀನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು