Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:9 - ಕನ್ನಡ ಸಮಕಾಲಿಕ ಅನುವಾದ

9 “ನೀನೆದ್ದು ಸೀದೋನಿಗೆ ಹೊಂದಿದ ಚಾರೆಪತಕ್ಕೆ ಹೋಗಿ ಅಲ್ಲಿ ವಾಸವಾಗಿರು. ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:9
11 ತಿಳಿವುಗಳ ಹೋಲಿಕೆ  

ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು.


ಚಾರೆಪತಿನವರೆಗೂ ಇರುವ ಪ್ರದೇಶವನ್ನು ಕಾನಾನ್ಯರಲ್ಲಿರುವ ಇಸ್ರಾಯೇಲ್ ಸೆರೆವಾಸಿಗಳು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿರುವ ಯೆರೂಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.


ಯೆಹೋವ ದೇವರು ಗಿದ್ಯೋನನಿಗೆ, “ಜನರು ಇನ್ನೂ ತುಂಬ ಇದ್ದರೆ; ಅವರನ್ನು ಹತ್ತಿರದ ಹಳ್ಳಕ್ಕೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡಿ ಆರಿಸುವೆನು. ನಿನ್ನ ಸಂಗಡ ಹೋಗುವವರಲ್ಲಿ ಯಾವನನ್ನು ಕುರಿತು ಹೇಳುವೆನೋ, ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು ನಿನ್ನ ಸಂಗಡ ಬರಬಾರದೆಂದು ಯಾವನನ್ನು ಕುರಿತು ಹೇಳುವೆನೋ, ಅವನು ಹೋಗಬಾರದು,” ಎಂದರು.


ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.


ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ,


ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.


ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು