1 ಅರಸುಗಳು 18:10 - ಕನ್ನಡ ಸಮಕಾಲಿಕ ಅನುವಾದ10 ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ. ಅಧ್ಯಾಯವನ್ನು ನೋಡಿ |