Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:17 - ಕನ್ನಡ ಸಮಕಾಲಿಕ ಅನುವಾದ

17 ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನನ್ನು ಕಂಡ ಕೂಡಲೆ - ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:17
9 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.


“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು