Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:21
27 ತಿಳಿವುಗಳ ಹೋಲಿಕೆ  

“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.


ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.


“ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.


ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.


ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.


ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.


ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.


ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು