1 ಅರಸುಗಳು 18:23 - ಕನ್ನಡ ಸಮಕಾಲಿಕ ಅನುವಾದ23 ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ. ಒಂದು ಹೋರಿಯನ್ನು ಅವರು ಆಯ್ದುಕೊಂಡು, ಅದನ್ನು ತುಂಡುತುಂಡಾಗಿ ಕಡಿದು, ಬೆಂಕಿ ಹಾಕದೆ, ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆ ಮಾಡಿ, ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲ್ಲೊಂದನ್ನು ಆರಿಸಿಕೊಂಡು, ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನೂ ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ, ಅವುಗಳಲ್ಲೊಂದನ್ನು ಆರಿಸಿಕೊಂಡು ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಎರಡು ಹೋರಿಗಳನ್ನು ತನ್ನಿ. ಬಾಳನ ಪ್ರವಾದಿಗಳು ಒಂದು ಹೋರಿಯನ್ನು ತೆಗೆದುಕೊಳ್ಳಲಿ. ಅವರು ಅದನ್ನು ಕೊಂದು, ತುಂಡುತುಂಡಾಗಿ ಕತ್ತರಿಸಲಿ. ನಂತರ ಅವರು ಆ ಮಾಂಸವನ್ನು ಸೌದೆಯ ಮೇಲಿಡಲಿ. ಆದರೆ ಬೆಂಕಿಯನ್ನು ಹೊತ್ತಿಸುವುದು ಬೇಡ. ಆಗ ನಾನು ಮತ್ತೊಂದು ಹೋರಿಯನ್ನು ಅವರಂತೆಯೇ ಕತ್ತರಿಸುವೆನು. ನಾನೂ ಬೆಂಕಿಯನ್ನು ಹೊತ್ತಿಸುವುದಿಲ್ಲ. ಅಧ್ಯಾಯವನ್ನು ನೋಡಿ |