1 ಅರಸುಗಳು 18:26 - ಕನ್ನಡ ಸಮಕಾಲಿಕ ಅನುವಾದ26 ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.