Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:31 - ಕನ್ನಡ ಸಮಕಾಲಿಕ ಅನುವಾದ

31 “ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:31
17 ತಿಳಿವುಗಳ ಹೋಲಿಕೆ  

ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.


ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಅವರು ಯೊರ್ದನಿನಿಂದ ತೆಗೆದುಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.


ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.


“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.


“ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.


ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು