Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:37 - ಕನ್ನಡ ಸಮಕಾಲಿಕ ಅನುವಾದ

37 ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಈ ಜನರಿಗೆಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:37
22 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.


ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.


ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು