1 ಅರಸುಗಳು 18:4 - ಕನ್ನಡ ಸಮಕಾಲಿಕ ಅನುವಾದ4 ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 (ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 (ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.) ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.