1 ಅರಸುಗಳು 18:43 - ಕನ್ನಡ ಸಮಕಾಲಿಕ ಅನುವಾದ43 ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅವನು ತನ್ನ ಸೇವಕನಿಗೆ - ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಆ ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಆ ಸೇವಕನು ಏಳು ಸಲ ಹೋದನು. ಅಧ್ಯಾಯವನ್ನು ನೋಡಿ |