Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:7 - ಕನ್ನಡ ಸಮಕಾಲಿಕ ಅನುವಾದ

7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:7
16 ತಿಳಿವುಗಳ ಹೋಲಿಕೆ  

ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.


ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು.


ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,


ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.


ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.


ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.


“ಹಾಗಿದ್ದಲ್ಲಿ ಆ ಹುಡುಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು. ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.


ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.


ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.


ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.


ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.


ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು.


ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು