Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:9 - ಕನ್ನಡ ಸಮಕಾಲಿಕ ಅನುವಾದ

9 ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ತಾವು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ಓಬದ್ಯನು - ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವದೇಕೆ? ನಾನೇನು ಪಾಪಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಓಬದ್ಯನು, “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:9
5 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.


ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು