Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:11
31 ತಿಳಿವುಗಳ ಹೋಲಿಕೆ  

ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.


ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು:


ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ.


ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.


ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು. ಇಸ್ರಾಯೇಲರ ದೇವರ ಮುಂದೆ, ಹೌದು, ದೇವರ ಮುಂದೆಯೇ ಸೀನಾಯಿ ಸಹ ಕದಲಿತು.


ಬೆಳಿಗ್ಗೆ ನೀನು ಸಿದ್ಧನಾಗಿ ಸೀನಾಯಿ ಬೆಟ್ಟವನ್ನೇರಿ, ಆ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.


ಯೆಹೋವ ದೇವರು ಸೀನಾಯಿ ಬೆಟ್ಟದ ತುದಿಯಲ್ಲಿ ಇಳಿದುಬಂದು ಮೋಶೆಯನ್ನು ಬೆಟ್ಟದ ತುದಿಗೆ ಕರೆದರು. ಮೋಶೆಯು ಮೇಲೆ ಹೋದನು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.


ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.


ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.


ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ


ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.


ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು