Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:13 - ಕನ್ನಡ ಸಮಕಾಲಿಕ ಅನುವಾದ

13 ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಡೆಗೆ ಮಂದಮಾರುತ ಶಬ್ದ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:13
11 ತಿಳಿವುಗಳ ಹೋಲಿಕೆ  

ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.


ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು.


“ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.


ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು