Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:14 - ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:14
15 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.


ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.


‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.”


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.


“ಕರ್ತಾ, ಅವರು ನಿಮ್ಮ ಪ್ರವಾದಿಗಳನ್ನು ಕೊಂದಿದ್ದಾರೆ. ನಿಮ್ಮ ಬಲಿಪೀಠವನ್ನು ಒಡೆದುಹಾಕಿದ್ದಾರೆ, ನಾನು ಒಬ್ಬನೇ ಉಳಿದಿದ್ದೇನೆ. ಅವರು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ,” ಎಂದು ಇಸ್ರಾಯೇಲರಿಗೆ ವಿರೋಧವಾಗಿ ದೇವರಲ್ಲಿ ವಿಜ್ಞಾಪನೆ ಮಾಡಿಕೊಂಡನು.


ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.


ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.


ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು