Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನು ಅವನಿಗೆ - ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:15
9 ತಿಳಿವುಗಳ ಹೋಲಿಕೆ  

ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


“ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.


ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.


ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.


ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು