1 ಅರಸುಗಳು 19:19 - ಕನ್ನಡ ಸಮಕಾಲಿಕ ಅನುವಾದ19 ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು. ಅಧ್ಯಾಯವನ್ನು ನೋಡಿ |