1 ಅರಸುಗಳು 19:21 - ಕನ್ನಡ ಸಮಕಾಲಿಕ ಅನುವಾದ21 ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಂತರ ಎಲೀಷನು ಹೋಗಿ ತಾನು ಉಳುತ್ತಿದ್ದ ಎತ್ತುಗಳನ್ನು ವಧಿಸಿ, ಮಾಂಸವನ್ನು ನೊಗದಿಂದಲೇ ಬೇಯಿಸಿ ಜನರೆಲ್ಲರಿಗೆ ಔತಣವನ್ನು ಏರ್ಪಡಿಸಿದನು. ನಂತರ ಅವನು ಎಲೀಯನನ್ನು ಹಿಂಬಾಲಿಸಿ ಅವನ ಸಹಾಯಕನಾದನು. ಅಧ್ಯಾಯವನ್ನು ನೋಡಿ |