Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು - ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು; ಅವನು ನಿನ್ನ ಮಾತನ್ನು ತಳ್ಳುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅದೋನೀಯನು, “ರಾಜನಾದ ಸೊಲೊಮೋನನು ನೀನು ಏನನ್ನು ಕೇಳಿದರೂ ಮಾಡುತ್ತಾನೆಂಬುದು ನನಗೆ ತಿಳಿದಿದೆ. ಆದ್ದರಿಂದ, ಶೂನೇಮಿನ ಅಬೀಷಗ್ ಎಂಬ ಸ್ತ್ರೀಯನ್ನು ನನಗೆ ಕೊಡುವಂತೆ ದಯಮಾಡಿ ನೀನು ಅವನನ್ನು ಕೇಳು. ನಾನು ಅವಳನ್ನು ಮದುವೆಯಾಗುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:17
5 ತಿಳಿವುಗಳ ಹೋಲಿಕೆ  

ನಿನ್ನ ಯಜಮಾನನ ಮನೆಯನ್ನೂ, ನಿನ್ನ ಯಜಮಾನನ ಹೆಂಡತಿಯರನ್ನೂ ನಿನಗೆ ಕೊಟ್ಟು; ಇಸ್ರಾಯೇಲಿನ ಮನೆಯನ್ನೂ, ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ, ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು.


ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.


ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು.


ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು