1 ಅರಸುಗಳು 2:29 - ಕನ್ನಡ ಸಮಕಾಲಿಕ ಅನುವಾದ29 ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ - ಹೋಗಿ ಅವನ ಮೇಲೆ ಬೀಳು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಞವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದ್ದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |