Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:3 - ಕನ್ನಡ ಸಮಕಾಲಿಕ ಅನುವಾದ

3 ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ದೇವರಾದ ಯೆಹೋವನ ಕಟ್ಟಳೆಯನ್ನು ಕೈಕೊಂಡು ಆತನ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮ ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವದಾದರೆ ನೀನು ಯಾವದನ್ನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:3
33 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.


ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


“ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು; ಪೂರ್ಣ ಭರವಸೆಗೆ ಅವು ಯೋಗ್ಯವಾದವುಗಳು.


ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.


ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.


ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.


ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.


ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು.


ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.


ಅವರ ದೇಶವನ್ನು ತೆಗೆದುಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸೊತ್ತಾಗಿ ಕೊಟ್ಟೆವು.


“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು