1 ಅರಸುಗಳು 2:32 - ಕನ್ನಡ ಸಮಕಾಲಿಕ ಅನುವಾದ32 ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ. ಅಧ್ಯಾಯವನ್ನು ನೋಡಿ |