1 ಅರಸುಗಳು 2:4 - ಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’” ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.