Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:40 - ಕನ್ನಡ ಸಮಕಾಲಿಕ ಅನುವಾದ

40 ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅವನು ಕತ್ತೆಗೆ ತಡಿಹಾಕಿಸಿ ತನ್ನ ಗುಲಾಮರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ದಾಸರು ಗತ್ ಊರಿನಲ್ಲಿರುವದು ಶಿಮ್ಮಿಗೆ ಗೊತ್ತಾದಾಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವದಕ್ಕೋಸ್ಕರ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟುಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದ್ದರಿಂದ ಶಿಮ್ಮಿಯು ತಡಿಯನ್ನು ತನ್ನ ಕತ್ತೆಯ ಮೇಲೆ ಹಾಕಿಕೊಂಡು, ಗತ್‌ನ ರಾಜನಾದ ಆಕೀಷನ ಬಳಿಗೆ ಹೋದನು. ಅವನು ತನ್ನ ಗುಲಾಮರನ್ನು ಅಲ್ಲಿ ಕಂಡುಹಿಡಿದು ತನ್ನ ಮನೆಗೆ ಮತ್ತೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:40
6 ತಿಳಿವುಗಳ ಹೋಲಿಕೆ  

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.


ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.


ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು.


ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು