Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:43 - ಕನ್ನಡ ಸಮಕಾಲಿಕ ಅನುವಾದ

43 ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಹಾಗಾದರೆ, ಸರ್ವೇಶ್ವರನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಏಕೆ ಕೈಗೊಳ್ಳಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಗ ನೀನು - ಒಳ್ಳೇದು, ಹಾಗೆಯೇ ಮಾಡುತ್ತೇನೆ ಎಂದು ಹೇಳಿದಿಯಲ್ಲಾ. ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಯಾಕೆ ಕೈಕೊಳ್ಳಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನೀನು ದೇವರಿಗೆ ಮಾಡಿದ ಪ್ರಮಾಣವನ್ನು ಯಾಕೆ ಕೈಕೊಳ್ಳಲಿಲ್ಲ? ನೀನು ನನ್ನ ಆಜ್ಞೆಗೆ ಯಾಕೆ ವಿಧೇಯನಾಗಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:43
7 ತಿಳಿವುಗಳ ಹೋಲಿಕೆ  

ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.


ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?


ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು