Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:46 - ಕನ್ನಡ ಸಮಕಾಲಿಕ ಅನುವಾದ

46 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಬಳಿಕ ಯೆಹೋಯಾದವನ ಮಗ ಬೆನಾಯನಿಗೆ ಅವನನ್ನು ಸಂಹರಿಸಬೇಕೆಂದು ಆಜ್ಞಾಪಿಸಿದನು. ಅಂತೆಯೇ ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರ ಸುಭದ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೆಹೋಯಾದಾವನ ಮಗನಾದ ಬೆನಾಯನಿಗೆ ಅವನನ್ನು ಸಂಹರಿಸೆಂದು ಆಜ್ಞಾಪಿಸಲು ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:46
7 ತಿಳಿವುಗಳ ಹೋಲಿಕೆ  

ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು.


ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.


ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.


ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.


ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.


ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು