Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:8 - ಕನ್ನಡ ಸಮಕಾಲಿಕ ಅನುವಾದ

8 “ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮಿ ನಿನ್ನ ಬಳಿ ಇರುತ್ತಾನೆ; ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹುಕ್ರೂರವಾಗಿ ಶಪಿಸಿದನು; ಆದರೂ ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಜೋರ್ಡನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕೊಲ್ಲುವುದಿಲ್ಲ,’ ಎಂಬುದಾಗಿ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮಿಯು ನಿನ್ನ ಬಳಿಯಲ್ಲಿರುತ್ತಾನಲ್ಲಾ; ನಾನು ಮಹನಯಿವಿುಗೆ ಹೋದಾಗ ಅವನು ನನ್ನನ್ನು ಬಹುಕ್ರೂರವಾಗಿ ಶಪಿಸಿದನು; ಅವನು ನನ್ನನ್ನು ಎದುರುಗೊಳ್ಳುವದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ - ನಿನ್ನನ್ನು ಕೊಲ್ಲುವದಿಲ್ಲ ಎಂಬದಾಗಿ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:8
6 ತಿಳಿವುಗಳ ಹೋಲಿಕೆ  

ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು.


ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು