1 ಅರಸುಗಳು 20:10 - ಕನ್ನಡ ಸಮಕಾಲಿಕ ಅನುವಾದ10 ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!” ಅಧ್ಯಾಯವನ್ನು ನೋಡಿ |