1 ಅರಸುಗಳು 20:11 - ಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |