Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:13 - ಕನ್ನಡ ಸಮಕಾಲಿಕ ಅನುವಾದ

13 ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:13
22 ತಿಳಿವುಗಳ ಹೋಲಿಕೆ  

ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆದರೂ ನಾನು ನನ್ನ ಕೈಯನ್ನು ಹಿಂತೆಗೆದು, ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ, ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.


“ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.


ನಾನು ಫರೋಹನ ಮೇಲೆಯೂ ಅವನ ರಥಗಳ ಮೇಲೆಯೂ ಅವನ ಕುದುರೆ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಂಡಾಗ, ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.


ಅಹಾಬನು, “ಯಾರ ಕೈಯಿಂದ?” ಎಂದನು. ಅದಕ್ಕವನು, “ ‘ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆಗ ಅಹಾಬನು, “ಯುದ್ಧ ಪ್ರಾರಂಭ ಮಾಡುವವನು ಯಾರು?” ಎಂದನು. ಅದಕ್ಕೆ ಆ ಪ್ರವಾದಿಯು, “ನೀನೇ,” ಎಂದನು.


ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.


ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.


ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.


ಇದಲ್ಲದೆ ಇದು ಯೆಹೋವ ದೇವರ ದೃಷ್ಟಿಗೆ ಅಲ್ಪವಾಗಿರುವುದು. ಅವರು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವರು.


ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು