15 ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.
15 ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.
15 ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.
ಆಗ ಯೆಹೋವ ದೇವರು ಗಿದ್ಯೋನನಿಗೆ, “ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ, ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸುವೆನು. ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದರು.
ಅಹಾಬನು, “ಯಾರ ಕೈಯಿಂದ?” ಎಂದನು. ಅದಕ್ಕವನು, “ ‘ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆಗ ಅಹಾಬನು, “ಯುದ್ಧ ಪ್ರಾರಂಭ ಮಾಡುವವನು ಯಾರು?” ಎಂದನು. ಅದಕ್ಕೆ ಆ ಪ್ರವಾದಿಯು, “ನೀನೇ,” ಎಂದನು.