Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:26 - ಕನ್ನಡ ಸಮಕಾಲಿಕ ಅನುವಾದ

26 ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಂದು ವರುಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:26
10 ತಿಳಿವುಗಳ ಹೋಲಿಕೆ  

“ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.


ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.


ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.


ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.


ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.


ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.


ಅದಕ್ಕೆ ಉಮ್ಮಾ, ಅಫೇಕ್ ಮತ್ತು ರೆಹೋಬ್ ಒಟ್ಟು ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.


ಸೀದೋನ್ಯರ ಆರಾ ಪ್ರದೇಶದಿಂದ ಅಫೇಕ್ ಮತ್ತು ಅಮೋರಿಯರ ಮೇರೆಯವರೆಗೆ ಕಾನಾನ್ಯರ ಎಲ್ಲಾ ದೇಶವು,


ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ನಂತರ ನೀನು ಕಳೆದುಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ, ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು. ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ. ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗುವೆವು,” ಎಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು