1 ಅರಸುಗಳು 20:30 - ಕನ್ನಡ ಸಮಕಾಲಿಕ ಅನುವಾದ30 ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು; ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು. ಅಧ್ಯಾಯವನ್ನು ನೋಡಿ |