Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:32 - ಕನ್ನಡ ಸಮಕಾಲಿಕ ಅನುವಾದ

32 ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ನನಗೆ ಜೀವದಾನಮಾಡಬೇಕೆಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ ಅಂದರು. ಆಗ ಅವನು - ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಹೀಗೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು’” ಎಂದರು. ಅಹಾಬನು, “ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:32
12 ತಿಳಿವುಗಳ ಹೋಲಿಕೆ  

ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.


ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು.


ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು