Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:33 - ಕನ್ನಡ ಸಮಕಾಲಿಕ ಅನುವಾದ

33 ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಈ ಮಾತು ಶುಭವಚನವೆಂದು ನೆನೆಸಿ, ಕೂಡಲೆ ಅವನ ಮಾತನ್ನೇ ಅನುಮೋದಿಸಿ, “ಬೆನ್ಹದದನು ನಿಮ್ಮ ಸಹೋದರನೇ ಹೌದು,” ಎಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು. ಅವನು ಬಂದಾಗ ಅವನನ್ನು ತನ್ನ ರಥದಲ್ಲೇ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು - ಬೆನ್ಹದದನು ನಿನ್ನ ಸಹೋದರನೇ ಹೌದು ಅಂದರು. ಅವನು ಅವರಿಗೆ - ಹೋಗಿ ಬೆನ್ಹದದನನ್ನು ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು. ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:33
7 ತಿಳಿವುಗಳ ಹೋಲಿಕೆ  

ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.


“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.


ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.


ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,


ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.


ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.


ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು