1 ಅರಸುಗಳು 20:34 - ಕನ್ನಡ ಸಮಕಾಲಿಕ ಅನುವಾದ34 ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿ |