Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:35 - ಕನ್ನಡ ಸಮಕಾಲಿಕ ಅನುವಾದ

35 ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:35
15 ತಿಳಿವುಗಳ ಹೋಲಿಕೆ  

ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.


ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಅದಕ್ಕೆ ಅಲ್ಲಿಯವನೊಬ್ಬನು, “ಹಾಗಾದರೆ ಅವರ ನಾಯಕರು ಯಾರು?” ಎಂದನು. ಆದ್ದರಿಂದ, “ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂಬ ಗಾದೆ ಉಂಟಾಯಿತು.


ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು