Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:39 - ಕನ್ನಡ ಸಮಕಾಲಿಕ ಅನುವಾದ

39 ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅರಸನು ಹಾದುಹೋಗುವಾಗ ಅವನಿಗೆ, “ನಿಮ್ಮ ಸೇವಕನಾದ ನಾನು ಯುದ್ಧಕ್ಕೆ ಹೋಗಿದ್ದಾಗ ರಣರಂಗದಲ್ಲಿ ಒಬ್ಬನು, ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ನಿನ್ನ ಪ್ರಾಣವು ನನ್ನದಾಗಿರುವುದು; ಇಲ್ಲವೆ ನೀನು ನನಗೆ ಮೂರು ಸಾವಿರ ಬೆಳ್ಳಿನಾಣ್ಯವನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವನು ಹಾದುಹೋಗುವಾಗ ಅವನಿಗೆ - ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬನು ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು - ನೀನು ಇವನನ್ನು ಕಾಯಬೇಕು; ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವದು; ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ನಾಲ್ಕು ಕಿಲೋಗ್ರಾಂ ದಂಡ ಕೊಡಬೇಕಾಗುವುದು’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:39
14 ತಿಳಿವುಗಳ ಹೋಲಿಕೆ  

ಅವರು ಬಲಿಗಳನ್ನೂ, ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇಶಿಸಿದ ತರುವಾಯ, ಯೇಹುವು ಹೊರಗೆ ಎಂಬತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ, “ನಾನು ನಿಮ್ಮ ಕೈಗೆ ಒಪ್ಪಿಸಿದ ಮನುಷ್ಯರಲ್ಲಿ ಯಾವನಾದರೂ ತಪ್ಪಿಸಿಕೊಂಡುಹೋದರೆ, ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿರುವುದು,” ಎಂದನು.


ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.


ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ; ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು.


ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.


ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿಸಿದರೆ, ಅವನು ತನಗೆ ನೇಮಿಸಿದ್ದನ್ನೆಲ್ಲಾ ತನ್ನ ಪ್ರಾಣವಿಮೋಚನೆಗಾಗಿ ಕೊಡಲಿ.


ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು.


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು