42 ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.
42 ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
42 ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.
42 ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
42 ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು.
ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು.
ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.
ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.
ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;