Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:43 - ಕನ್ನಡ ಸಮಕಾಲಿಕ ಅನುವಾದ

43 ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಇಸ್ರಯೇಲರ ಅರಸನು ಸಿಟ್ಟಿನಿಂದ, ಗಂಟುಮೋರೆ ಮಾಡಿಕೊಂಡು, ಸಮಾರಿಯದಲ್ಲಿ ಇದ್ದ ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಇಸ್ರಾಯೇಲ್ಯರ ಅರಸನು ಸಿಟ್ಟಿನಿಂದ ಗಂಟುಮೋರೆಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:43
7 ತಿಳಿವುಗಳ ಹೋಲಿಕೆ  

“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.


ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು