Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಇಸ್ರಾಯೇಲ್ಯರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರಿಸಿ ಅವರಿಗೆ - ನೋಡಿದಿರಾ, ಅವನು ನಮಗೆ ಕೇಡು ಬಗೆಯುತ್ತಾನೆ; ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು ಎಂದು ಅವನು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಅಹಾಬನು ತನ್ನ ರಾಜ್ಯದ ಹಿರಿಯರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ಹದದನು ಕೇಡುಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದೆನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅಪೇಕ್ಷೆಪಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:7
18 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.


ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ.


ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.


ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.


ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ.


ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.


ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?


ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.


ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.


ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”


ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.


ದಾವೀದನು ಸಾವಿರ ಮಂದಿಗೂ, ನೂರು ಮಂದಿಗೂ ಪ್ರಧಾನರಾದವರ ಸಂಗಡ, ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.


ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.


ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’ ” ಎಂದನು.


ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು.


ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು